×
Ad

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಶಿಬಿರ

Update: 2021-04-12 20:31 IST

ಉಡುಪಿ, ಎ.12: ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡುಗಳನ್ನು ವಿತರಿಸುವ ಬಗ್ಗೆ ನಡೆಯುತ್ತಿದ್ದ ಶಿಬಿರಗಳನ್ನು ಕೊರೋನ ಕಾರಣಗಳಿಂದ ಕೆಲವು ಸಮಯದಿಂದ ನಿಲ್ಲಿಸಲಾಗಿದ್ದು, ಪ್ರಸ್ತುತ ಕೋವಿಡ್-19 ಮಾರ್ಗಸೂಚಿಯನ್ವಯ ಶಿಬಿರಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದೆ.

ಜಿಲ್ಲೆಯಲ್ಲಿರುವ ವಿವಿಧ ಸಂಘ ಸಂಸ್ಧೆಗಳು, ಸಾರ್ವಜನಿಕರಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡುಗಳನ್ನು ಕೋವಿಡ್-19 ಮಾರ್ಗಸೂಚಿಯನ್ವಯ ವಿತರಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಭರತ್ ಕುಮಾರ್ (6360166958), ಸಚ್ಚಿದಾನಂದ (8197011421) ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News