ಹಾಸನ: ಪ್ರತಿಭಟನಾ ಸ್ಥಳದಲ್ಲಿಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೆಎಸ್‌ಆರ್‌ಟಿಸಿ ನೌಕರ

Update: 2021-04-12 16:02 GMT

ಹಾಸನ, ಎ.12: ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾ ಸ್ಥಳದಲ್ಲಿಯೇ ಕೆಎಸ್‌ಆರ್‌ಟಿಸಿ ಚಾಲಕರೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಹೇಮಾವತಿ ಪ್ರತಿಮೆ ಬಳಿ ನಡೆದಿದೆ.

ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಹಾಸನ ಡಿಪೋ 1ರ ಚಾಲಕ ಕಂ ನಿರ್ವಾಹಕ ಕೆ.ಕೆ. ಪಾಲಕ್ಷ ಎಂಬವರು ಪ್ರತಿಭಟನೆ ವೇಳೆ ಸ್ಥಳದಲ್ಲಿಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ರೈತ ಸಂಘದ ನೇತೃತ್ವದಲ್ಲಿ ಸಾರಿಗೆ ನೌಕರರಿಂದ ತಟ್ಟೆ, ಲೋಟ ಚಳುವಳಿ ಹಮ್ಮಿಕೊಂಡಿದ್ದು, ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆಗೆ ತಯಾರಾಗಿದ್ದಾಗ ಸಾರಿಗೆ ನೌಕರ ಪಾಲಾಕ್ಷ ಎಂಬವರು ವಿಷ ಸೇವನೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಅವರನ್ನು ಜಿಲ್ಲಾ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ.

ಪಾಲಕ್ಷ ಅವರಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಕರೆ ಮಾಡಿ ಒತ್ತಡ ತರುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇವರನ್ನು ಕೂಡ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಲಾಗಿತ್ತು ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News