ರಾಹುಲ್,ದೀಪಕ್ ಬ್ಯಾಟಿಂಗ್ ಅಬ್ಬರ, ಪಂಜಾಬ್ 221/6

Update: 2021-04-12 16:05 GMT

 ಮುಂಬೈ, ಎ.12: ಆರಂಭಿಕ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಹಾಗೂ ದೀಪಕ್ ಹೂಡಾ ಅವರ ಅಬ್ಬರದ ಬ್ಯಾಟಿಂಗ್ ಬೆಂಬಲದಿಂದ ಪಂಜಾಬ್ ಕಿಂಗ್ಸ್ ತಂಡ ಸೋಮವಾರ ಇಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಉತ್ತಮ ಮೊತ್ತ ಕಲೆ ಹಾಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 221 ರನ್ ಗಳಿಸಿದೆ.

ಕನ್ನಡಿಗರಾದ ರಾಹುಲ್ ಹಾಗೂ ಮಯಾಂಕ ಅಗರ್ವಾಲ್ ಇನಿಂಗ್ಸ್ ಆರಂಭಿಸಿದರು. ಮಯಾಂಕ್ 3ನೇ ಓವರ್‌ನಲ್ಲಿ ವಿಕೆಟ್ ಕೈಚೆಲ್ಲಿದರು. ಆಗ ಜೊತೆಯಾದ ರಾಹುಲ್ ಹಾಗೂ ಕ್ರಿಸ್ ಗೇಲ್(40, 28 ಎಸೆತ, 4 ಬೌಂ.2 ಸಿ.)ಎರಡನೇ ವಿಕೆಟ್‌ಗೆ 67 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು.

ಗೇಲ್ ಔಟಾದ ಬಳಿಕ ದೀಪಕ್ ಹೂಡಾ(64, 28 ಎಸೆತ, 4 ಬೌಂ.6 ಸಿ.)ಅವರೊಂದಿಗೆ 3ನೇ ವಿಕೆಟ್‌ಗೆ 105 ರನ್ ಸೇರಿಸಿದ ರಾಹುಲ್ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ದರು. ರಾಹುಲ್ 19.2ನೇ ಓವರ್‌ನಲ್ಲಿ ಚೇತನ್ ಸಕಾರಿಯಾಗೆ ವಿಕೆಟ್ ಒಪ್ಪಿಸಿದರು. ಔಟಾಗುವ ಮೊದಲು ರಾಹುಲ್ 50 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಸಹಿತ 91 ರನ್ ಗಳಿಸಿದರು. ಕೇವಲ 9 ರನ್‌ನಿಂದ ಶತಕವಂಚಿತರಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News