×
Ad

ದ.ಕ.ಜಿಲ್ಲೆ: 73 ಮಂದಿಗೆ ಕೊರೋನ ಪಾಸಿಟಿವ್

Update: 2021-04-12 21:52 IST

ಮಂಗಳೂರು, ಎ.12: ದ.ಕ.ಜಿಲ್ಲೆಯಲ್ಲಿ ಸೋಮವಾರ 73 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 36,858 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.

ಸೋಮವಾರ 102 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ 35,072 ಮಂದಿ ಗುಣಮುಖರಾಗಿ ಬಿಡುಗಡೆ ಗೊಂಡಂತಾಗಿದೆ. ಜಿಲ್ಲೆಯಲ್ಲಿ ಈವರೆಗೆ 6,65,721 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 6,28,834 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 1043 ಸಕ್ರಿಯ ಪ್ರಕರಣವಿದೆ.

ದಂಡ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದುದಕ್ಕೆ ಸಂಬಂಧಿಸಿ ಈವರೆಗೆ 44,950 ಪ್ರಕರಣ ದಾಖಲಿಸಿ, 46,69,830 ರೂ. ದಂಡ ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News