ಮಾಜಿ ಸಚಿವ ವಿನಯ್ ಕುಲಕರ್ಣಿ ಸೋದರನ ಕಾರು ಅಪಘಾತ: ಇಬ್ಬರು ಮೃತ್ಯು, ಇನ್ನಿಬ್ಬರಿಗೆ ತೀವ್ರ ಗಾಯ

Update: 2021-04-12 16:55 GMT

ಧಾರವಾಡ, ಎ.12: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸೋದರ ವಿಜಯ ಕುಲಕರ್ಣಿ ಸಂಚರಿಸುತ್ತಿದ್ದ ಕಾರು ಮೂರು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಸೋಮವಾರ ನಗರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ಮೃತರನ್ನು ಚರಣ ನಾಯಕ್ (17) ಹಾಗೂ ಶೇಖರ ಹುದ್ದಾರ (40) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಬರುತ್ತಿದ್ದ ಕಾರು ಕುಮಾರೇಶ್ವರ ನಗರದ ಕೆವಿಜಿ ಬ್ಯಾಂಕ್‌ ಬಳಿ ರಸ್ತೆ ಪಕ್ಕದಲ್ಲಿ ನಿಂತಿದ್ದ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕಾರು ವಿಜಯ ಕುಲಕರ್ಣಿ ಅವರಿಗೆ ಸೇರಿದ್ದು ಎನ್ನಲಾಗಿದ್ದು, ಚಾಲಕನ ಪಕ್ಕದ ಸೀಟಿನಲ್ಲಿ ಅವರು ಕುಳಿತಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಘಟನೆಗೆ ಸಂಬಂಧಿಸಿದಂತೆ ಧಾರವಾಡ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News