ಗಾಂಜಾ ಮಾರಾಟ ಆರೋಪ: ನಾಲ್ವರ ಬಂಧನ, 60 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ

Update: 2021-04-12 17:28 GMT

ಬೆಂಗಳೂರು, ಎ.12: ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಬಂಧಿಸಿರುವ ಎಚ್‍ಎಸ್‍ಆರ್ ಲೇಔಟ್ ಠಾಣಾ ಪೊಲೀಸರು 60 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಕೇರಳದ ಕಾಸರಗೋಡಿನ ಮಸ್ತಾಕ್(31), ಆಶೀಕ್ (19), ಬಂಟ್ವಾಳದ ಸಮೀರ್ (28), ಮಂಗಳೂರು ಮೂಲದ ಹಫ್ರೀಝ್(23) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆಂದು ಡಿಸಿಪಿ ಶ್ರೀನಾಥ್ ಮಹದೇವ ಜೋಷಿ ತಿಳಿಸಿದ್ದಾರೆ.

ಬಂಧಿತರಿಂದ 15 ಲಕ್ಷ ರೂ. ಮೌಲ್ಯದ 48 ಕೆ.ಜಿ. 180 ಗ್ರಾಂ ಗಾಂಜಾ, 45 ಲಕ್ಷ ರೂ. ಮೌಲ್ಯದ 1 ಕೆ.ಜಿ. 134 ಗ್ರಾಂ ಆಸಿಸ್ ಆಯಿಲ್, ತೂಕದ ಯಂತ್ರ, ಸ್ಲೀಪಲ್ ಕೋಚ್ ಬಸ್, ಬೊಲೆರೊ ವಾಹನ ಹಾಗೂ 4700 ರೂ.ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕೇರಳದಿಂದ ಗಾಂಜಾ ಹಾಗೂ ಆಸಿಸ್ ಆಯಿಲ್‍ನ್ನು ಕಳ್ಳಸಾಗಣೆ ಮಾಡಿಕೊಂಡು ಬಂದು ನಗರದಲ್ಲೆಡೆ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News