ಸಾರಿಗೆ ನೌಕರರ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಯತ್ನ: ಸಿದ್ದರಾಮಯ್ಯ

Update: 2021-04-13 07:50 GMT

ಬೆಂಗಳೂರು, ಏ.13: ಸತತ ಏಳು ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಪ್ರತಿಭಟನೆಯನ್ನು ರಾಜ್ಯ ಸರ್ಕಾರ ಬಲವಂತವಾಗಿ ಹತ್ತಿಕ್ಕಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಎಸ್ಸಾರ್ಟಿಸಿ ನೌಕರರ ಮುಷ್ಕರವನ್ನು ರಾಜ್ಯ ಬಿಜೆಪಿ ಸರ್ಕಾರ ಪೊಲೀಸ್ ಬಲದ ಮೂಲಕ ದಮನಿಸಲು ಹೊರಟಿರುವುದು ಖಂಡನೀಯ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಮುಷ್ಕರ ನಿರತ ನೌಕರರನ್ನು ವಾರಂಟ್ ಇಲ್ಲದೇ ಬಂಧಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕವನ್ನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಅಕ್ರಮವಾಗಿ ವರ್ಗಾವಣೆ, ಅಮಾನತು ಮತ್ತು ಮನೆ ಖಾಲಿ ಮಾಡಿಸುವ ಮೂಲಕ ಮುಷ್ಕರ ನಿರತ ನೌಕರರನ್ನು ಯಡಿಯೂರಪ್ಪ ಬೆದರಿಸಲು ಹೊರಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಸಿಎಂ ಹಠಕ್ಕೆ ಬೀಳದೇ ತಕ್ಷಣ ಮುಷ್ಕರ ನಿರತ ನೌಕರರನ್ನು ಮಾತುಕತೆಗೆ ಕರೆದು ಈಗಿನ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಒತ್ತಾಯಿಸಿರುವ ಅವರು, ಇದು ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ ಅಮಾನವೀಯ ನಡೆ ಕೂಡಾ ಆಗಿದೆ ಎಂದು ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News