ಬಿಜೆಪಿ ಮುಖಂಡ ರಾಹುಲ್ ಸಿನ್ಹಾಗೆ 48 ಗಂಟೆಗಳ ಕಾಲ ಪ್ರಚಾರಕ್ಕೆ ನಿಷೇಧ ಹೇರಿದ ಚುನಾವಣಾ ಆಯೋಗ
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ನಲ್ಲಿ ನಡೆದ ಗುಂಡಿನ ದಾಳಿಯ ಕುರಿತಾದಂತೆ ವಿವಾದಾತ್ಮ ಹೇಳಿಕೆ ನೀಡಿದ ಬಿಜೆಪಿ ಮುಖಂಡ ರಾಹುಲ್ ಸಿನ್ಹಾಗೆ ೪೮ ಗಂಟೆಗಳ ನಿಷೇಧ ಹೇರಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಕುರಿತಾದಂತೆ ಬಿಜೆಪಿ ಮುಖಂಡ ದಿಲೀಪ್ ಘೋಷ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ಹೊರಡಿಸಿದೆ.
"ಕೇವಲ ನಾಲ್ಕು ಮಂದಿ ಮಾತ್ರವಲ್ಲ 8 ಮಂದಿಯನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು" ಎಂದು ರಾಹುಲ್ ಸಿನ್ಹಾ ಹೇಳಿಕೆ ನೀಡಿದ ಬಳಿಕ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ. ಬುಧವಾರ ಬೆಳಿಗ್ಗೆ 10 ಗಂಟೆಯೊಳಗೆ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಅವರು ಈ ಹೇಳಿಕೆಗೆ ವಿವರಣೆ ನೀಡಬೇಕೆಂದು ಕೋರಿ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಕೂಚ್ ಬೆಹಾರ್ ಗುಂಡಿನ ದಾಳಿಯ ಘಟನೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡರಾದ ರಾಹುಲ್ ಸಿನ್ಹಾ, ದಿಲೀಪ್ ಘೋಷ್ ಮತ್ತು ಸಯಂತನ್ ಬಸು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಟಿಎಂಸಿ ಸೋಮವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು.