​ದ.ಕ.ಜಿಲ್ಲೆಯಲ್ಲಿ ಮಂಗಳವಾರ 142 ಮಂದಿಗೆ ಕೊರೋನ ಪಾಸಿಟಿವ್

Update: 2021-04-13 15:05 GMT

ಮಂಗಳೂರು, ಎ.13: ದ.ಕ.ಜಿಲ್ಲೆಯಲ್ಲಿ ಮಂಗಳವಾರ 142 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 37,000 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.

ಮಂಗಳವಾರ 76 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ 35,148 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ.

ಜಿಲ್ಲೆಯಲ್ಲಿ ಈವರೆಗೆ 6,68,999 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 6,31,999 ಮಂದಿಯ ವರದಿ ನೆಗೆಟಿವ್ ಬಂದಿದೆ.  ಜಿಲ್ಲೆಯಲ್ಲಿ ಈವರೆಗೆ 743 ಮಂದಿ ಕೊರೋನಕ್ಕೆ ಬಲಿಯಾಗಿದ್ದು, ಸದ್ಯ ಜಿಲ್ಲೆಯಲ್ಲಿ 11 ಸಕ್ರಿಯ ಪ್ರಕರಣವಿದೆ.

ದಂಡ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದುದಕ್ಕೆ ಸಂಬಂಧಿಸಿ ಈವರೆಗೆ 45,179 ಪ್ರಕರಣ ದಾಖಲಿಸಿ, 46,93,730 ರೂ. ದಂಡ ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News