ಕಾಸರಗೋಡು: ಮಂಗಳವಾರ 430 ಮಂದಿಗೆ ಕೊರೋನ ಪಾಸಿಟಿವ್

Update: 2021-04-13 15:49 GMT

ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 430 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇಂದು 62 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 2909 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ. 10,128 ಮಂದಿ ನಿಗಾದಲ್ಲಿದ್ದಾರೆ.

ಅಜನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 30, ಕಾಞಂಗಾಡ್ 52, ಕಯ್ಯೂರು - ಚಿಮೇನಿ 14, ನೀಲೇಶ್ವರ 44 ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಇದುವರೆಗೆ 35,014 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 31,780 ಮಂದಿ ಗುಣಮುಖರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News