ಜಾತಿ, ಧರ್ಮ, ಭಾಷೆಗಳ ಗಡಿಗಳನ್ನು ಮೀರಿದ ಭಾರತ ಕಟ್ಟಲು ಪಣ ತೊಡೋಣ: ಹರಿಕೃಷ್ಣ ಬಂಟ್ವಾಳ್

Update: 2021-04-14 07:18 GMT

ಬೆಳ್ತಂಗಡಿ, ಎ.14: ಜಾತಿ, ಧರ್ಮ, ಭಾಷೆಗಳ ಗಡಿಗಳನ್ನು ಮೀರಿದ ಭಾರತವನ್ನು ಕಟ್ಟಲು ಅಂಬೇಡ್ಕರ್ ಜಯಂತಿಯ ದಿನದಂದು ನಾವು ಪಣ ತೊಡಬೇಕಾಗಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.

ಅವರು ಬೆಳ್ತಂಗಡಿಯ ಮಂಜುನಾಥ ಕಲಾಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಾಗೂ ಪಟ್ಟಣ ಪಂಚಾಯತ್ ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತರತ್ನ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ ಕನ್ನಡ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಡಾ.ಬಿ.ವಿ.ವಸಂತ ಕುಮಾರ್ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸರಕಾರದ ವಿವಿಧ ಸೌಲಭ್ಯಗಳನ್ನು ಶಾಸಕರು ವಿತರಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿಪಂ ಸಾಮಾಜಿಕ ಸ್ಥಾಯಿ ಸಮಿತಿಯ ಅಧ್ಯಕ್ಷೆ ಮಮತಾ ಎಂ. ಶೆಟ್ಟಿ, ಸದಸ್ಯರಾದ ಕೊರಗಪ್ಪ ನಾಯ್ಕ್, ಸೌಮ್ಯಲತಾ, ತಾಪಂ ಅಧ್ಯಕ್ಷೆ ದಿವ್ಯಜ್ಯೋತಿ, ಸ್ಥಾಯಿ ಸಮಿತಿಯ ಅಧ್ಯಕ್ಷ ಶಶಿಧರ ಕಲ್ಮಂಜ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಸ್ಥಾಯಿ ಸಮಿತಿಯ ಅಧ್ಯಕ್ಷೆ ತುಳಸಿ, ತಹಶೀಲ್ದಾರ್ ಮಹೇಶ್ ಜೆ., ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್. ಹಾಗೂ ತಾಪಂ ಸದಸ್ಯರು, ಅಕ್ರಮ-ಸಕ್ರಮ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಝೀ ಕನ್ನಡ ಡ್ಯಾನ್ಸ್ ಕರ್ನಾಟಕ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ ಬೆಳ್ತಂಗಡಿಯ ಪ್ರತಿಭೆ ಪ್ರತಿಕ್ಷಾ ಅವರ ಪರವಾಗಿ ಪೋಷಕರನ್ನು ಗೌರವಿಸಲಾಯಿತು.

ತಾ.ಪಂ.‌ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ ಪ್ರಸ್ತಾವಿಸಿದರು.

ಹೇಮಲತಾ ಹಾಗೂ ಜಯಾನಂದ ಲಾಯಿಲ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News