ಕೊಡಗಿನ ವಿವಿಧೆಡೆ ಭಾರೀ ಮಳೆ

Update: 2021-04-14 12:55 GMT

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇಂದು ಸುರಿದ ಸಿಡಿಲು, ಗುಡುಗು ಸಹಿತ ಧಾರಾಕಾರ ಮಳೆಗೆ ಮಡಿಕೇರಿಯ ಕೆಲವು ಭಾಗಗಳಲ್ಲಿ ಮರ, ಬರೆ ಕುಸಿದು ಹಾನಿಯಾದ ಘಟನೆ ನಡೆದಿದೆ.

ವಿರಾಜಪೇಟೆ, ಸೋಮವಾರಪೇಟೆ, ನಾಪೋಕ್ಲು, ಸಿದ್ದಾಪುರ, ಸುಂಟಿಕೊಪ್ಪ,  ಭಾಗದಲ್ಲಿ ಉತ್ತಮ ಮಳೆಯಾಗಿದೆ.  

ಮಡಿಕೇರಿ ನಗರದಲ್ಲಿ ಸುಮಾರು ಒಂದು ಗಂಟೆ ಸುರಿದ ಮಳೆಗೆ ಚರಂಡಿ ಮತ್ತು ರಸ್ತೆಗಳಲ್ಲಿ ನೀರು ತುಂಬಿ ಹರಿದಿದೆ. ರಾಜಾಸೀಟು ಉದ್ಯಾವನದ ಆವರಣದಲ್ಲಿ ಮರವೊಂದು ಬಿದ್ದು ಹಾನಿಯಾಗಿದೆ. ಮಂಗಳೂರು ರಸ್ತೆಯ ಒಂದು ಬದಿಯ ಬರೆ ಕುಸಿದಿದ್ದು, ನಿರಂತರ ಮಳೆಯಾದರೆ ರಸ್ತೆಗೆ ಹಾನಿಯಾಗುವ ಸಾಧ್ಯತೆಗಳಿದೆ. 

ನಗರದ ವಿವಿಧ ಬಡಾವಣೆಗಳ ರಸ್ತೆಗಳು ಜಲಾವ್ರತಗೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಅಲ್ಲಲ್ಲಿ ಬರೆ ಬಿದ್ದ ಘಟನೆಯೂ ನಡೆದಿದೆ. ಗುಡ್ಡದ ಮೇಲಿನ ನಿವಾಸಿಗಳು ಗಾಳಿ, ಮಳೆಗೆ ಆತಂಕಗೊಂಡಿದ್ದರು. ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News