ಪಿರಿಯಾಪಟ್ಟಣ: 'ಮಹಾನಾಯಕ' ಅಂಬೇಡ್ಕರ್ ಫ್ಲೆಕ್ಸ್ ಗೆ ದುಷ್ಕರ್ಮಿಗಳಿಂದ ಬೆಂಕಿ

Update: 2021-04-14 14:06 GMT

ಮೈಸೂರು,ಎ.14: 'ಮಹಾನಾಯಕ' ಡಾ.ಬಿ.ಆರ್.ಅಂಬೇಡ್ಕರ್ ಪ್ಲೆಕ್ಸ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕು ಬೆಳತ್ತೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಯವಕರು ಇಂದು ಅಂಬೇಡ್ಕರ್ ಜಯಂತಿ ಆಚರಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದ್ದರು. ಮಂಗಳವಾರ ರಾತ್ರಿ ಕೆಲವರು ಉದ್ದೇಶ ಪೂರ್ವಕವಾಗಿ ಅಂಬೇಡ್ಕರ್ ಫ್ಲೆಕ್ಸ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅವರೇ ಈ ಘಟನೆಗೆ ಕಾರಣ ಕರ್ತರಾಗಿದ್ದಾರೆ ಎಂದು ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News