ಉಡುಪಿ: ಮೂರು ದಿನ ಭಾರೀ ಮಳೆಯ ಮುನ್ಸೂಚನೆ
Update: 2021-04-14 21:07 IST
ಉಡುಪಿ, ಎ.14: ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಇದರೊಂದಿಗೆ ಬಲವಾದ ಗಾಳಿ ಹಾಗೂ ಗುಡುಗಿನೊಂದಿಗೆ ಸಿಡಿಲು ಕಾಣಿಸಿಕೊಳ್ಳಲಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಎ.15, 16 ಹಾಗೂ 17ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಬಲವಾದ ಗಾಳಿ-ಮಳೆ ಸುರಿಯಲಿದೆ ಎಂದು ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.