ದ.ಕ.ಜಿಲ್ಲೆ: 140 ಮಂದಿಗೆ ಕೊರೋನ ಪಾಸಿಟಿವ್

Update: 2021-04-14 16:21 GMT

ಮಂಗಳೂರು, ಎ.14: ದ.ಕ.ಜಿಲ್ಲೆಯಲ್ಲಿ ಬುಧವಾರ ,140 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 37,140 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.

ಬುಧವಾರ 97 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ 35,245 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ ಈವರೆಗೆ 6,74,544 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 6,37,404 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 1152 ಸಕ್ರಿಯ ಪ್ರಕರಣವಿದೆ. *ದಂಡ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದುದಕ್ಕೆ ಸಂಬಂಧಿಸಿ ಈವರೆಗೆ 45,414 ಪ್ರಕರಣ ದಾಖಲಿಸಿ, 47,16,230 ರೂ. ದಂಡ ವಸೂಲಿ ಮಾಡಲಾಗಿದೆ.
...

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News