ಸಂವಿಧಾನದ ಬದಲಾವಣೆ ಪ್ರಜಾಪ್ರಭುತ್ವಕ್ಕೆ ಆಘಾತ: ಸೊರಕೆ

Update: 2021-04-14 16:24 GMT

ಉಡುಪಿ, ಎ.14: ಸಮಾಜದಲ್ಲಿ ಜಾತಿಯ ಹೆಸರಿನಲ್ಲಿ ತುಳಿತಕ್ಕೊಳಗಾದ ಜನರಿಗೆ ನ್ಯಾಯ ದೊರಕಿಸಿ ಕೊಡಲು ನಿರಂತರ ಹೋರಾಟದ ಮೂಲಕ ತನ್ನ ಜೀವನವನ್ನೇ ಮುಡಿಪಾಗಿಟ್ಟವರು ಅಂಬೇಡ್ಕರ್. ಅವರು ದೇಶಕ್ಕೆ ಕೊಟ್ಟ ಸಂವಿಧಾನವನ್ನು ಬದಲಾವಣೆ ಮಾಡುವ ಮಾತು ಕೇಳಿ ಬರುತ್ತಿರುವುದು ಆಘಾತಕಾರಿ. ಇದು ಪ್ರಜಾಪ್ರಭುತ್ವಕ್ಕೆ ಅಪಾಯವನ್ನು ತಂದುಕೊಡಬಹುದು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ. ಘಟಕದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾದ ಅಂಬೇಡ್ಕರ್‌ರವರ 130ನೆ ಜನ್ಮ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕೆಪಿಸಿಸಿ ಸಂಯೋಜಕ ನವೀನ್‌ಚಂದ್ರ ಶೆಟ್ಟಿ ಮಾತನಾಡಿದರು.

ಈ ಸಂದರ್ಭದಲ್ಲಿ ಆರ್.ಜಿ.ಪಿ.ಆರ್.ಎಸ್.ನ ರೋಶನಿ ಒಲಿವರ್, ಜಿಲ್ಲಾ ಕಾಂಗ್ರೆಸ್‌ನ ಪ್ರಖ್ಯಾತ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶಬ್ಬೀರ್ ಅಹ್ಮದ್, ಹರೀಶ್ ಕಿಣಿ, ಯುವ ಕಾಂಗ್ರೆಸ್‌ನ ಅಬ್ದುಲ್ ಅಜೀಜ್ ಹೆಜಮಾಡಿ, ಕೀರ್ತಿ ಶೆಟ್ಟಿ, ಎನ್ಎಸ್ಯುಐ ಅಧ್ಯಕ್ಷ ಸೌರಭ್ ಬಲ್ಲಾಳ್, ಕೇಶವ ಎಂ.ಕೋಟ್ಯಾನ್, ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಶೆಟ್ಟಿ ಪಾಂಗಾಳ, ಕೃಷ್ಣಮೂರ್ತಿ ಆಚಾರ್ಯ, ಲೂಯಿಸ್ ಲೋಬೋ, ದಿನೇಶ್ ಕೋಟ್ಯಾನ್, ಸದಾಶಿವ ಕಟ್ಟೆಗುಡ್ಡೆ, ಬ್ಲಾಕ್ ಎಸ್.ಸಿ. ಘಟಕದ ಅಧ್ಯಕ್ಷ ಗಣೇಶ್ ನೆರ್ಗಿ, ಮೇರಿ ಡಿಸೋಜ, ಜಯಶ್ರೀ ಶೇಟ್, ಶಾಂತಿ ಪಿರೇರಾ, ಸತೀಶ್ ಮಂಚಿ, ಯುವರಾಜ್ ಪುತ್ತೂರು ಮೊದಲಾದವರು ಉಪಸ್ಥಿತರಿದ್ದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾ ರ್ಕಾರ್ ಕಾರ್ಯಕ್ರಮ ನಿರ್ವಹಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News