ಶಾಸಕ ಎಸ್.ಎ.ರಾಮದಾಸ್‍ಗೆ ಕೊರೋನ ಸೋಂಕು ದೃಢ

Update: 2021-04-14 16:43 GMT

ಮೈಸೂರು,ಎ.14: ಮೈಸೂರು ನಗರದ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಇಂದು ಶಾಸಕ ರಾಮದಾಸ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ, ಗುದ್ದಲಿಪೂಜೆಯಲ್ಲಿ ಪಾಲ್ಗೊಂಡಿದ್ದರು. 

ಕಳೆದ ಕೆಲ ದಿನಗಳ ಹಿಂದೆ ಶಾಸಕ ರಾಮದಾಸ್ ಅವರಿಗೆ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಹೀಗಾಗಿ ಪರೀಕ್ಷೆಗಾಗಿ ಸ್ಯಾಂಪಲ್ ನೀಡಿದ್ದರು. ಇದೀಗ ಶಾಸಕ ರಾಮದಾಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ವರದಿ ಬಂದಿದ್ದು, ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News