ಹೆಜಮಾಡಿ: ಡಾ.ಅಂಬೇಡ್ಕರ್ ಜನ್ಮ ದಿನಾಚರಣೆ

Update: 2021-04-14 17:58 GMT

ಪಡುಬಿದ್ರಿ: ಸಂವಿಧಾನವನ್ನು ಅರ್ಥಮಾಡಿಕೊಳ್ಳುವ ಮೊದಲು ಅಂಬೇಡ್ಕರ ಬಗ್ಗೆ ತಿಳಿಯದಿದ್ದರೆ ಸಂವಿಧಾನ ಅರ್ಥವಾಗದು. ಅವನ್ನು ತಿಳಿದುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸೋಣ ಎಂದು ಎಂದು ಸಾಮಾಜಿಕ ಕಾರ್ಯಕರ್ತ ಹೆಜಮಾಡಿ ಸುರೇಶ್ ಶೆಣೈ ಹೇಳಿದರು.

ಹೆಜಮಾಡಿ ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರ ಪಂಚಾಯಿತಿ ವಠಾರದಲ್ಲಿ ಹಮ್ಮಿಕೊಂಡ ಡಾ. ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಜೀವನದ ಅನುಭವಗಳನ್ನು ಸಂವಿಧಾನದಲ್ಲಿ ಧಾರೆ ಎರೆದಿದ್ದರು. ಅದೊಂದು ಜೀವನ ಸಂದೇಶ ನಾವು ಅನುಭವಿಸುತ್ತಿರುವ ಸಮಾನತೆ, ಸಾಮಾಜಿಕ ನ್ಯಾಯ, ಭಾತೃತ್ವ ಮತ್ತು ಸ್ವಾತಂತ್ರ್ಯವನ್ನು ಸಂವಿಧಾನದಲ್ಲಿ ಅಡಕಗೊಳಿಸಿದ ಕಾರಣ ನಾವಿಂದು ಸುಮಧುರ ಜೀವನ ಸಾಗಿಸುತ್ತಿದ್ದೇವೆ. ಅವರು ಶಿಕ್ಷಣ, ಸಂಘರ್ಷ ಮತ್ತು ಸಂಘಟನೆಗಳ ಬಗ್ಗೆ ಸವಿವರವಾಗಿ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಪೌರ ಕಾರ್ಮಿಕ ರವಿಯವರು ಅಂಬೇಡ್ಕರ್ ಭಾವಚಿತ್ರಕ್ಕೆ ದೀಪ ಬೆಳಗಿಸಿ ಗೌರವ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಪುಷ್ಪಾರ್ಚನೆ ಮೂಲಕ ಗೌರವ ಸಲ್ಲಿಸಲಾಯಿತು.
ಹೆಜಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಾಣೇಶ್ ಹೆಜ್ಮಾಡಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಉಪಾಧ್ಯಕ್ಷೆ ಪವಿತ್ರಾ ಗಿರೀಶ್, ಪಂಚಾಯಿತಿ ಸದಸ್ಯರು, ಸಿಬ್ಬಂದಿಯವರು, ಎಸ್‍ಎಲ್‍ಆರ್‍ಎಮ್ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾಪಂ ಸದಸ್ಯ ಜನಾರ್ಧನ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News