ಬಲ್ಲಾಳ್ ಬಾಗ್: ಹೈಪರ್ ಮಾರ್ಕೆಟ್ ನಲ್ಲಿ ಬೆಂಕಿ ಅವಘಢ, ಅಪಾರ ನಷ್ಟ

Update: 2021-04-15 05:26 GMT

ಮಂಗಳೂರು, ಎ.15: ನಗರದ ಬಲ್ಲಾಳ್ ಬಾಗ್ ನಲ್ಲಿರುವ ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ನಲ್ಲಿ ಬುಧವಾರ ರಾತ್ರಿ ಬೆಂಕಿ ಅವಘಢ ಸಂಭವಿಸಿರುವುದು ವರದಿಯಾಗಿದೆ.

ಹೈಪರ್ ಮಾರ್ಕೆಟ್ ನಲ್ಲಿ ಕಳೆದ ರಾತ್ರಿ 11:15ರ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿತ್ತೆನ್ನಲಾಗಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಇಂದು ಬೆಳಗ್ಗೆ ಅಂಗಡಿಯೊಳಗೆ ಬೆಂಕಿಯ ಕಿಡಿ ಕಾಣಿಸಿಕೊಂಡಿದ್ದರಿಂದ ಅಗ್ನಿಶಾಮಕ ದಳವು ಮತ್ತೊಮ್ಮೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದುಬಂದಿದೆ.

ಬೆಂಕಿ ಅವಘಢದಿಂದ ಹೈಪರ್ ಮಾರ್ಕೆಟ್ ನಲ್ಲಿದ್ದ ಅಪಾರ ಸಾಮಗ್ರಿಗಳು ಸುಟ್ಡು ಕರಕಲಾಗಿದ್ದು, ಸುಮಾರು ಒಂದು ಕೋಟಿ ರೂ.ಗೂ ಅಧಿಕ ನಷ್ಟ ಅಂದಾಜಿಸಲಾಗಿದೆ. ಆದರೆ ಈವರೆಗೆ ಅಂದಾಜು‌ ನಷ್ಟದ ಬಗ್ಗೆ ಅಧಿಕೃತ ‌ದೂರು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News