​ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ: ವಿರಾಟ್ ಕೊಹ್ಲಿಗೆ ಛೀಮಾರಿ

Update: 2021-04-15 06:31 GMT

ಚೆನ್ನೈ: ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ದ ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್-2021 ಪಂದ್ಯದ ವೇಳೆ ಇಂಡಿಯನ್ ಪ್ರೀಮಿಯರ್ ಲೀಗ್‍ನ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಅವರಿಗೆ ಛೀಮಾರಿ ಹಾಕಲಾಗಿದೆ ಎಂದು ಐಪಿಎಲ್ ಮಾಧ್ಯಮ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಬುಧವಾರ  ನಡೆದ ಪಂದ್ಯದ ವೇಳೆ 29 ಎಸೆತಗಳಲ್ಲಿ 33 ರನ್ ಗಳಿಸಿ ಜೇಸನ್ ಹೋಲ್ಡರ್ ಗೆ ವಿಕೆಟ್ ಒಪ್ಪಿಸಿದ್ದ ಕೊಹ್ಲಿ ಪೆವಿಲಿಯನ್ ನತ್ತ ವಾಪಸ್ ತೆರಳುತ್ತಿದ್ದಾಗ  ಬೌಂಡರಿ ಲೈನ್ ನಲ್ಲಿ ಜಾಹೀರಾತು ಕುಶನ್ ಗೆ ಬ್ಯಾಟ್‍ನಿಂದ ಹೊಡೆದರಲ್ಲದೆ, ತಂಡದ ಡಗ್ ಔಟ್ ನಲ್ಲಿದ್ದ ಕುರ್ಚಿಗೂ ಬ್ಯಾಟ್‍ನಿಂದ ಹೊಡೆದು ಆಕ್ರೋಶ ಹೊರಹಾಕಿದರು.

ಪಂದ್ಯದ ಸಮಯದಲ್ಲಿ ಕ್ರಿಕೆಟ್ ಉಪಕರಣಗಳು ಅಥವಾ ಬಟ್ಟೆ, ನೆಲವಸ್ತುಗಳು ಹಾಗೂ ಫಿಟ್ಟಿಂಗ್ ಗಳ ದುರುಪಯೋಗಕ್ಕೆ ಸಂಬಂಧಿಸಿದ ಲೆವೆಲ್ 1 ತಪ್ಪನ್ನು ಕೊಹ್ಲಿ ಒಪ್ಪಿಕೊಂಡಿದ್ದಾರೆ. ನೀತಿ ಸಂಹಿತೆಯ ಹಂತ 1ರ ಉಲ್ಲಂಘನೆಗಾಗಿ ಪಂದ್ಯದ ತೀರ್ಪುಗಾರರ ನಿರ್ಧಾರವು ಅಂತಿಮವಾಗಿದೆ ಎಂದು ಐಪಿಎಲ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News