ಚುನಾವಣಾ ಅಕ್ರಮ ಆರೋಪ: ಬಿಜೆಪಿ, ಪಿಎಸ್ಐ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

Update: 2021-04-15 12:24 GMT

ರಾಯಚೂರು, ಎ.15: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಅಕ್ರಮಗಳ ಕುರಿತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಡಾಕೇಶ್ ಹಾಗೂ ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಸ್ಕಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್ ನಿಯೋಗ, ಮಟ್ಟೂರು ಗ್ರಾಮದಲ್ಲಿ ಎರಡು ಚೀಲಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಹಣ ಸಾಗಣೆ ಮಾಡಲಾಗಿದೆ. ಮುದಗಲ್ ಠಾಣೆಯ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಒಂದು ಚೀಲವನ್ನು ಬೇರೆಡೆ ಸಾಗಿಸಿದ್ದಾರೆ. ಕ್ಷೇತ್ರದಲ್ಲಿ ಕಾನೂನುಬದ್ಧವಾಗಿ ಚುನಾವಣೆ ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತು.

ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಂಸದ ಉಗ್ರಪ್ಪ, ಶಾಸಕ ಬಸನಗೌಡ ದದ್ದಲ್, ಮಾಜಿ ಶಾಸಕ ಭೋಸರಾಜ್, ಯುವ ಮುಖಂಡ ಬಸವನಗೌಡ ಬಾದರ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News