ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆ ಮುಂದೂಡಬೇಕೆಂದು ಕೋರಿ ಸುಪ್ರೀಂ ಮೊರೆ ಹೋದ ವೈದ್ಯರು

Update: 2021-04-15 13:07 GMT

ಹೊಸದಿಲ್ಲಿ: ದೇಶಾದ್ಯಂತ ಹೊಸ ಕೋವಿಡ್-19  ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ವಿದ್ಯಾರ್ಥಿಗಳು-ವೈದ್ಯರ ಗುಂಪು ಗುರುವಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಗಳನ್ನು ಎಪ್ರಿಲ್ 18 ರಂದು ನಿಗದಿಪಡಿಸಲಾಗಿದ್ದು, ಅಂದಾಜು 1.7 ಲಕ್ಷ ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ವೈದ್ಯರು ಈ ಪ್ರಕ್ರಿಯೆಗೆ ನೋಂದಾಯಿಸಿಕೊಂಡಿದ್ದಾರೆ.

ಕೋವಿಡ್-19 ರೋಗಿಗಳಿಗೆ ಪ್ರತಿದಿನ ಚಿಕಿತ್ಸೆ ನೀಡುವ ವೈದ್ಯರನ್ನು ದೈಹಿಕ ಪರೀಕ್ಷೆಗೆ ಹಾಜರಾಗುವಂತೆ ಒತ್ತಾಯಿಸುವುದು ಸಾವಿರಾರು ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುವುದಕ್ಕೆ ಸಮಾನವಾಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಮೇ 4 ರಿಂದ ಪ್ರಾರಂಭವಾಗಬೇಕಿದ್ದ ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿರುವ ಹಾಗೂ 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿರುವ ಕೇಂದ್ರ ಸರಕಾರದ ಇತ್ತೀಚಿನ ನಿರ್ಧಾರವನ್ನೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News