ದಿಲ್ಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಗೆ ಜಾಮೀನು ಮಂಜೂರು ಮಾಡಿದ ದಿಲ್ಲಿ ನ್ಯಾಯಾಲಯ

Update: 2021-04-15 14:16 GMT

ಹೊಸದಿಲ್ಲಿ: ಈಶಾನ್ಯ ದಿಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಜೆಎನ್ ಯು ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ಗುರುವಾರ ದಿಲ್ಲಿ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಫೆಬ್ರವರಿ 2020 ರಲ್ಲಿ ಖಜೂರಿ ಖಾಸ್‌ನಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಖಾಲಿದ್‌ಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿನೋದ್ ಯಾದವ್ ಜಾಮೀನು ನೀಡಿದರು.

ಆದಾಗ್ಯೂ, ದಿಲ್ಲಿ ಗಲಭೆಗೆ ಸಂಬಂಧಿಸಿದ ಯುಎಪಿಎ ಪ್ರಕರಣದಲ್ಲಿ ಖಾಲಿದ್ ಇನ್ನಷ್ಟೇ ಜಾಮೀನು ಪಡೆಯಬೇಕಾಗಿದೆ.

ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ರಾಜಕೀಯ ದ್ವೇಷದಿಂದ ತನಿಖಾ ಸಂಸ್ಥೆಯು ಈ ವಿಷಯದಲ್ಲಿ ಸುಳ್ಳು ಆರೋಪ ಹೊರಿಸಿದೆ ಎಂದು ಖಾಲಿದ್ ಪರವಾಗಿ ಹಾಜರಾದ ಹಿರಿಯ ವಕೀಲ ತ್ರಿದೀಪ್ ಪಾಯಿಸ್ ವಾದಿಸಿದರು.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಮಯದಲ್ಲಿ ಜೈಲಿನಿಂದ ಹೊರಡುವ ಮೊದಲು ಆರೋಗ್ಯ ಸೇತು ಆ್ಯಪ್ ಅನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ಅಳವಡಿಸಿಕೊಳ್ಳುವಂತೆ ನ್ಯಾಯಾಲಯವು ಖಾಲಿದ್ ಅವರಿಗೆ ತಿಳಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಈಶಾನ್ಯ ದಿಲ್ಲಿಯಲ್ಲಿ ನಡೆದ ಘರ್ಷಣೆಯ ಸಂದರ್ಭದಲ್ಲಿ ಖಜೂರಿ ಖಾಸ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಜೆಎನ್‌ಯು ವಿದ್ಯಾರ್ಥಿಯನ್ನು ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News