ಪುತ್ತೂರು: ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹೆಚ್. ಮುಹಮ್ಮದ್ ಆಲಿ ನೇಮಕ

Update: 2021-04-15 14:28 GMT

ಪುತ್ತೂರು: ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಪುತ್ತೂರು ನಗರಸಭೆಯ ಮಾಜಿ ವಿಪಕ್ಷ ನಾಯಕ ಹೆಚ್. ಮುಹಮ್ಮದ್ ಆಲಿ ಅವರು ಪುತ್ತೂರು ನಗರ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಮುಹಮ್ಮದ್ ಆಲಿ ಅವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಅವರು ನೇಮಕಗೊಳಿಸಿ ಆದೇಶ ನೀಡಿದ್ದಾರೆ. 

ಸಂಪ್ಯ ಮಂಡಲ ಪಂಚಾಯತ್ ಅಧ್ಯಕ್ಷರಾಗಿ 5 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಮುಹಮ್ಮದ್ ಆಲಿ ಅವರು ಬಳಿಕ ನಿರಂತರ ಪುತ್ತೂರು ಪುರಸಭೆಯ ಸದಸ್ಯರಾಗಿದ್ದರು. ಪುರಸಭೆಯ ವಿಪಕ್ಷ ನಾಯಕರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಪುರಸಭೆ ಮೇಲ್ದರ್ಜೆಗೇರಿ ನಗರಸಭೆಯಾಗಿ ಪರಿವರ್ತನೆಗೊಂಡ ಬಳಿಕ ಒಂದು ಅವಧಿಗೆ ಸದಸ್ಯರಾಗಿದ್ದರು.

ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಅವರು ಎಚ್. ಮುಹಮ್ಮದ್ ಆಲಿ ಅವರನ್ನು ನಗರ ಕಾಂಗ್ರೆಸ್ ಅಧ್ಯಕ್ಷರನ್ನಾಗಿಸಲು ಶಿಪಾರಸ್ಸು ಮಾಡಿದ್ದರು. ಪುತ್ತೂರು ನಗರ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಪಕ್ಷವನ್ನು ಬಲಿಷ್ಠಗೊಳಿಸುವ ಹಿನ್ನಲೆಯಲ್ಲಿ ತಕ್ಷಣದಿಂದ ಕಾಂಗ್ರೆಸ್ ನಗರಾಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News