ದ.ಕ. ಜಿಲ್ಲೆಯಲ್ಲಿ 900ಕ್ಕೂ ಅಧಿಕ ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರು

Update: 2021-04-15 15:58 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಎ.15: ಆರನೇ ವೇತನ ಆಯೋಗದ ಶಿಫಾರಸು ಅನುಷ್ಠಾನಕ್ಕೆ ಆಗ್ರಹಿಸಿ ಕೆಎಸ್ಸಾರ್ಟಿಸಿ ಬಸ್ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ರಾಜ್ಯಾದ್ಯಂತ ನಡೆಯುತ್ತಿದ್ದರೂ ಕೂಡ ದ.ಕ. ಜಿಲ್ಲೆಯಲ್ಲಿ ಮುಷ್ಕರ ಕ್ಷೀಣಿಸಲಾರಂಭಿಸಿದೆ.

ಗುರುವಾರ ಜಿಲ್ಲೆಯಲ್ಲಿ ಸುಮಾರು 900ಕ್ಕೂ ಹೆಚ್ಚಿನ ಸಾರಿಗೆ ಸಿಬ್ಬಂದಿಯು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಅಲ್ಲದೆ 400ಕ್ಕೂ ಅಧಿಕ ಸರಕಾರಿ ಬಸ್‌ಗಳು ವಿವಿಧ ರೂಟ್‌ಗಳಲ್ಲಿ ಸಂಚರಿಸಿವೆ. ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಲ್ಲಿ 310 ಅನುಸೂಚಿಗಳಲ್ಲಿ ಬಸ್ ಕಾರ್ಯಾಚರಣೆ ನಡೆಸಿದೆ. ಕರ್ನಾಟಕ ಸಾರಿಗೆ, ರಾಜಹಂಸ, ನಾನ್ ಎಸಿ ಸ್ಲೀಪರ್, ವೋಲ್ವೋ, ವೋಲ್ವೋ ಮಲ್ಟಿ ಆಕ್ಸೆಲ್, ಡ್ರೀಮ್ ಕ್ಲಾಸ್ ಸಹಿತ ಸ್ಥರದ ಬಸ್‌ಗಳು ಕಾರ್ಯಾಚರಿಸಿದೆ. ನರ್ಮ್ ಬಸ್ ಸಂಚಾರ ಕೂಡ ಸೀಮಿತ ಸಂಖ್ಯೆಯಲ್ಲಿ ಓಡಾಡುತ್ತಿತ್ತು. ಪುತ್ತೂರು ವಿಭಾಗದಿಂದ ವಿವಿಧ ಕಡೆಗಳಲ್ಲಿ ಸುಮಾರು 70ಕ್ಕೂ ಹೆಚ್ಚಿನ ಬಸ್ ಸಂಚರಿಸಿತ್ತು.

ಕೆಎಸ್ಸಾರ್ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ ಶುಕ್ರವಾರವೂ ಮುಂದುವರೆಯಲಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News