×
Ad

​ಮರು ಮದುವೆಯಾಗುವ ಪ.ಪಂಡದ ವಿಧವೆಯರಿಗೆ ಪ್ರೋತ್ಸಾಹಧನ

Update: 2021-04-15 21:47 IST

ಉಡುಪಿ, ಎ.15: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ಮರು ಮದುವೆ ಯಾಗುವ ಪರಿಶಿಷ್ಟ ಪಂಗಡದ ವಿಧವೆಯರಿಗೆ 3 ಲಕ್ಷ ರೂ.ಗಳ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News