ಬಿಸಿಸಿಐ ಕೇಂದ್ರೀಯ ಗುತ್ತಿಗೆ: ‘ಎ’ ಪ್ಲಸ್ ಶ್ರೇಣಿ ಉಳಿಸಿಕೊಂಡ ಕೊಹ್ಲಿ, ರೋಹಿತ್, ಬುಮ್ರಾ

Update: 2021-04-16 07:54 GMT

ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಮಧ್ಯಮ ವೇಗಿ ಜಸ್‍ಪ್ರೀತ್ ಬುಮ್ರಾ ಅವರು ಬಿಸಿಸಿಐನ ಕೇಂದ್ರೀಯ ಗುತ್ತಿಗೆಯ ಪಟ್ಟಿಯಲ್ಲಿ ‘ಎ’ಪ್ಲಸ್ ಶ್ರೇಣಿಯನ್ನು ಉಳಿಸಿಕೊಂಡಿದ್ದಾರೆ. 

ಈ ಮೂವರು ಆಟಗಾರರು ತಲಾ 7 ಕೋ.ರೂ.ಮೌಲ್ಯ ಪಡೆಯಲಿದ್ದಾರೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಬಿ ಗುಂಪಿನಿಂದ ಎ ಗ್ರೇಡ್ ಗೆ ಭಡ್ತಿ ಪಡೆದಿದ್ದಾರೆ. ಈ ವರ್ಷ ಅವರು ಗಾಯದ ಸಮಸ್ಯೆಯಿಂದ ಹೆಚ್ಚು ಪಂದ್ಯಗಳಲ್ಲಿ ಆಡಿರಲಿಲ್ಲ. ಆಡಿದ ಕೆಲವು ಪಂದ್ಯಗಳಲ್ಲಿ ಬೌಲಿಂಗ್ ಮಾಡಿರಲಿಲ್ಲ.

ಗುರುವಾರ ಪ್ರಕಟಿಸಿರುವ ಗುತ್ತಿಗೆ ಪಟ್ಟಿಯಲ್ಲಿ ಒಟ್ಟು 28 ಆಟಗಾರರು ಸ್ಥಾನ ಪಡೆದಿದ್ದಾರೆ. ಶುಭಮನ್ ಗಿಲ್ ಹಾಗೂ ಮುಹಮ್ಮದ್ ಸಿರಾಜ್ ಇದೇ ಮೊದಲ ಬಾರಿ ಸ್ಥಾನ ಪಡೆದುಕೊಂಡಿದ್ದಾರೆ. ಸಿ ಗ್ರೇಡ್ ನಲ್ಲಿರುವ ಇವರಿಬ್ಬರು ತಲಾ 1 ಕೋ.ರೂ. ಪಡೆಯಲಿದ್ದಾರೆ. ಕನ್ನಡಿಗ ಕೆ.ಎಲ್.ರಾಹುಲ್ ಎ ಶ್ರೇಣಿ ಹಾಗೂ ಮಯಾಂಕ್ ಅಗರ್ವಾಲ್ ಬಿ ಗ್ರೇಡ್ ನಲ್ಲಿದ್ದಾರೆ.

ಗ್ರೇಡ್ ಗಳು

‘ಎ’ ಪ್ಲಸ್(7 ಕೋ.ರೂ.): ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್‍ಪ್ರೀತ್ ಬುಮ್ರಾ
‘ಎ’(5 ಕೋ.ರೂ.): ಆರ್.ಅಶ್ವಿನ್, ರವೀಂದ್ರ ಜಡೇಜ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಶಿಖರ ಧವನ್, ಕೆ.ಎಲ್.ರಾಹುಲ್, ಮುಹಮ್ಮದ್ ಶಮಿ, ಇಶಾಂತ್ ಶರ್ಮಾ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ.

ಬಿ’(3 ಕೋ.ರೂ.): ವೃದ್ಧಿಮಾನ್ ಸಹಾ, ಉಮೇಶ್ ಯಾದವ್, ಭುವನೇಶ್ವರ ಕುಮಾರ್, ಶಾರ್ದೂಲ್ ಠಾಕೂರ್, ಮಯಾಂಕ್ ಅಗರ್ವಾಲ್.

‘ಸಿ’(1 ಕೋ.ರೂ.): ಕುಲದೀಪ್ ಯಾದವ್, ನವದೀಪ್ ಸೈನಿ,ದೀಪಕ್ ಚಹಾರ್, ಶುಭಮನ್ ಗಿಲ್, ಹನುಮ ವಿಹಾರಿ, ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಾಲ್, ಮುಹಮ್ಮದ್ ಸಿರಾಜ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News