ಈ ರಾಜ್ಯದಲ್ಲಿ ಮಾಸ್ಕ್ ಧರಿಸದವರಿಗೆ 10,000 ರೂ. ದಂಡ

Update: 2021-04-16 09:22 GMT

ಲಕ್ನೊ: ಉತ್ತರಪ್ರದೇಶದಲ್ಲಿ ಮಾಸ್ಕ್ ಧರಿಸದ ಜನರು 10,000 ರೂ. ತನಕ ದಂಡ ತೆರಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಇಂದು ಆದೇಶಿಸಿದ್ದಾರೆ.

ರಾಜ್ಯದಲ್ಲಿ ಕೊರೋನದ ಎರಡನೇ ಅಲೆ ಕಾಣಿಸಿಕೊಂಡಿರುವ ಕಾರಣ ಈ ಕಠಿಣ ಕ್ರಮಕೈಗೊಳ್ಳಲಾಗಿದೆ. ರಾಜ್ಯದಲ್ಲಿ ರವಿವಾರ ಲಾಕ್ ಡೌನ್ ಘೋಷಿಸಲಾಗಿದೆ.
 

ಜನರು ಮಾಸ್ಕ್ ಧರಿಸದೆ ಮೊದಲ ಬಾರಿ ಸಿಕ್ಕಿಹಾಕಿಕೊಂಡರೆ 1,000 ರೂ. ಹಾಗೂ ಎರಡನೇ ಬಾರಿ ಸಿಕ್ಕಿಬಿದ್ದರೆ 10,000ರೂ. ದಂಡವನ್ನು ನೀಡಬೇಕಾಗುತ್ತದೆ.

ಮುಖ್ಯಮಂತ್ರಿ ಆದಿತ್ಯನಾಥ್ ಅವರು ದೇಶದ ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ರಾಜ್ಯದಲ್ಲಿ ವಾರಾಂತ್ಯದ ಲಾಕ್ ಡೌನ್ ಘೋಷಿಸಿದ್ದಾರೆ. ಕೇವಲ ಅಗತ್ಯವಿರುವ ಸೇವೆಗಳು ಹಾಗೂ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News