ಸರಕಾರಿ ಕಚೇರಿಗಳ ನಕಲಿ ಸೀಲ್ ಸೃಷ್ಟಿ ಪ್ರಕರಣ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್

Update: 2021-04-16 11:54 GMT

ಬೆಂಗಳೂರು, ಎ.16: ಕೆಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿಗಳ ನಕಲಿ ಸೀಲ್ ಮತ್ತು ಫ್ರಾಂಕಿಂಗ್ ಯಂತ್ರಗಳನ್ನು ಬಳಸಿಕೊಂಡು ನಕಲಿ ನೋಂದಣಿ ದಾಖಲೆಗಳನ್ನು ಸೃಷ್ಟಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ನಿರ್ದೇಶಿಸುವಂತೆ ಕೋರಿ ತ್ಯಾಗರಾಜ ನಗರ ನಿವಾಸಿ ಎಸ್.ನಾರಾಯಣ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನೋಟಿಸ್ ಜಾರಿ ಮಾಡಿದೆ.

ಕೆಲ ಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಸ್ಟ್ಯಾಂಪ್ ಪೇಪರ್ ನೋಂದಣಿ ಇಲಾಖೆಯ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರು, ಹಲಸೂರು ಗೇಟ್ ಠಾಣಾ ಪೊಲೀಸ್ ಇನ್‍ಸ್ಪೆಕ್ಟರ್ ಮತ್ತು ಸಿಬಿಐ ಅಧೀಕ್ಷಕರಿಗೆ ನೋಟಿಸ್ ಜಾರಿ ಮಾಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News