ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಕಠಿಣ ಕ್ರಮ: ಪೊಲೀಸ್ ಆಯುಕ್ತ ಕಮಲ್ ಪಂತ್

Update: 2021-04-16 12:37 GMT

ಬೆಂಗಳೂರು, ಎ.16: ಕೋವಿಡ್ ಸೋಂಕಿನ ಎರಡನೆ ಅಲೆ ವೇಗ ಪಡೆಯುತ್ತಿರುವ ಹಿನ್ನೆಲೆ ರಾಜ್ಯ ಸರಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಎಲ್ಲರೂ ಪಾಲನೆ ಮಾಡಬೇಕು. ಒಂದು ವೇಳೆ ಯಾರಾದರೂ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಉಲ್ಲಂಘನೆ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಅಲ್ಲದೆ, ಕಡ್ಡಾಯವಾಗಿ ಸಭೆ, ಸಮಾರಂಭ, ಪ್ರತಿಭಟನೆ ಮಾಡುವವರು ನಿಗದಿತ ಸಂಖ್ಯೆಯಲ್ಲಿ ಮಾತ್ರ ಇರಬೇಕು. ಮಾಸ್ಕ್ ಧರಿಸಿ, ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದರು.

ಪೊಲೀಸ್ ಇಲಾಖೆ ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದೆ. ನಾವೆಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಲಾಖೆ ಸಿಬ್ಬಂದಿ ಲಸಿಕೆ ಪಡೆದಿರುವುದರಿಂದ ಸದ್ಯಕ್ಕೆ ಸಮಸ್ಯೆಯಿಲ್ಲ ಎಂದ ಅವರು, ಕಳೆದ ವರ್ಷದಂತೆ ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಈ ಬಾರಿ ಹೊರಡಿಸುವುದಿಲ್ಲ. ಸರಕಾರದ ಆದೇಶ ನೋಡಿಕೊಂಡು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News