ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ
Update: 2021-04-16 21:39 IST
ಬೆಂಗಳೂರು, ಎ.16: ಕೋವಿಡ್ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಸ್ನಾತಕ, ಸ್ನಾತಕೋತ್ತರ ಹಾಗೂ ಎಂಜಿನಿಯರಿಂಗ್ ವಿಭಾಗದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಪತಿ ಪ್ರೊ.ವೇಣುಗೋಪಾಲ್ ತಿಳಿಸಿದ್ದಾರೆ.
ಬೆಂಗಳೂರು ನಗರಾದ್ಯಂತ ಕೋವಿಡ್ ಎರಡನೆ ಅಲೆ ಹೆಚ್ಚಾಗುತ್ತಿರುವುದರಿಂದ ವಿದ್ಯಾರ್ಥಿಗಳು, ಪ್ರಾಧ್ಯಾಪಕರ ಆರೋಗ್ಯದ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಸದರಿ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದೆಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.