ಐಪಿಎಲ್: ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈಗೆ ‘ಸೂಪರ್’ ಗೆಲುವು

Update: 2021-04-16 17:49 GMT

ಮುಂಬೈ: ಐಪಿಎಲ್ ಟೂರ್ನಿಯಲ್ಲಿ ಶುಕ್ರವಾರ ನಡೆದ 8ನೇ ಪಂದ್ಯದಲ್ಲಿ ಗೆಲ್ಲಲು ಸುಲಭ ಸವಾಲು ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಸುಲಭ ಗೆಲುವು ದಾಖಲಿಸಿದೆ.

ಗೆಲ್ಲಲು 107 ರನ್ ಗುರಿ ಪಡೆದ ಚೆನ್ನೈ ತಂಡ 15.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿ ಗೆಲುವಿನ ದಡ ಸೇರಿತು.

ಚೆನ್ನೈ ಪರವಾಗಿ ಆಲ್ ರೌಂಡರ್ ಮೊಯಿನ್ ಅಲಿ(46, 31 ಎಸೆತ, 7 ಬೌಂಡರಿ, 1 ಸಿಕ್ಸರ್) ಹಾಗೂ ಆರಂಭಿಕ ಬ್ಯಾಟ್ಸ್ ಮನ್ ಎಫ್ ಡು ಪ್ಲೆಸಿಸ್ (ಔಟಾಗದೆ 36, 33 ಎಸೆತ, 3 ಬೌಂಡರಿ, 1 ಸಿಕ್ಸರ್ )ಪ್ರಮುಖ ಕಾಣಿಕೆ ನೀಡಿದರು.

ಪಂಜಾಬ್ ಬೌಲಿಂಗ್ ವಿಭಾಗದಲ್ಲಿ ಮುಹಮ್ಮದ್ ಶಮಿ(2-21) ಯಶಸ್ವಿ ಬೌಲರ್ ಎನಿಸಿಕೊಂಡರು. ಅರ್ಷ ದೀಪ್ ಸಿಂಗ್(1-7) ಹಾಗೂ ಮುರುಗನ್ ಅಶ್ವಿನ್ (1-32)ತಲಾ ಒಂದು ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಜಯಿಸಿದ  ನಾಯಕ ಎಂ.ಎಸ್. ಧೋನಿ ಪಂಜಾಬ್ ತಂಡವನ್ನು ಮೊದಲಿಗೆ ಬ್ಯಾಟಿಂಗ್ ಗೆ ಆಹ್ವಾನಿಸಿದರು. ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ಗಳ ನಷ್ಟಕ್ಕೆ 106 ರನ್ ಗಳಿಸಲಷ್ಟೇ ಶಕ್ತವಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News