ಉಡುಪಿ: ಎ.19ರಿಂದ ವಾಣಿಜ್ಯ ಪರೀಕ್ಷೆ; ನಿಷೇಧಾಜ್ಞೆ ಜಾರಿ

Update: 2021-04-17 14:02 GMT

ಉಡುಪಿ, ಎ.17: ಸಾರ್ವಜನಿಕ ಶಿಕ್ಷಣ ಇಲಾಖೆಯ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದ ಪ್ರಸಕ್ತ ಸಾಲಿನ ವಾಣಿಜ್ಯ ಪರೀಕ್ಷೆಗಳು ಎ.19ರಿಂದ ಮೇ 6ರ ವರೆಗೆ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿವೆ.

ಈ ಸಂಬಂಧ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆ, ಅವ್ಯವಹಾರ ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡಲು ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಷೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆ ಆದೇಶ ಪರೀಕ್ಷೆ ನಡೆಯುವ ದಿನಗಳಂದು ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News