​ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ

Update: 2021-04-17 15:20 GMT

ಮಂಗಳೂರು, ಎ.17: ದ.ಕ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಶನಿವಾರ 309 ಮಂದಿಗೆ ಕೊರೋನ ಸೋಂಕು ತಗುಲಿದೆ. ಅಲ್ಲದೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್-19ಗೆ ಮೃತಪಟ್ಟವರ ಸಂಖ್ಯೆಯು 744ಕ್ಕೇರಿದೆ.

ಬಂಟ್ವಾಳ ಮೂಲದ 81ರ ಹರೆಯದ ವ್ಯಕ್ತಿಯೊಬ್ಬರು ನಾನಾ ರೋಗಗಳಿಂದ ಬಳಲುತ್ತಿದ್ದು ಅವರಿಗೆ ಕೋವಿಡ್ ಸೋಂಕು ತಗುಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿದೆ.

ಈ ವರ್ಷದ ನಾಲ್ಕು ತಿಂಗಳಲ್ಲಿಯೇ ಅತೀ ಹೆಚ್ಚು ಕೋವಿಡ್ ಪ್ರಕರಣ ಇದಾಗಿದೆ. ಶುಕ್ರವಾರ 256 ಮಂದಿಗೆ ಕೊರೋನ ಸೋಂಕು ತಗುಲಿದ್ದರೆ ಶನಿವಾರ 309 ಮಂದಿಗೆ ಸೋಂಕಾಗಿದೆ.

ಶನಿವಾರ ಜಿಲ್ಲೆಯಲ್ಲಿ ಕೊರೋನ ರೋಗದಿಂದ ಗುಣಮುಖರಾಗಿ 99 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1,623 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News