ಉಡುಪಿ ಜಿಲ್ಲೆಯಲ್ಲಿ ಶನಿವಾರ 118 ಮಂದಿಗೆ ಕೊರೋನ ಸೋಂಕು ದೃಢ

Update: 2021-04-17 15:28 GMT

ಉಡುಪಿ, ಎ.17: ಕೊರೋನ ಎರಡನೇ ಅಲೆ ಉಡುಪಿ ಜಿಲ್ಲೆಯಲ್ಲಿ ತೀವ್ರಗೊಳ್ಳುವ ಸೂಚನೆ ಕಂಡುಬರುತಿದ್ದು, ಶನಿವಾರ ಒಟ್ಟು 118 ಮಂದಿ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 126 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸದ್ಯಕ್ಕೆ ಜಿಲ್ಲೆಯಲ್ಲಿ ಇದಕ್ಕೆ ಸಕ್ರಿಯರಾಗಿರುವವರ ಸಂಖ್ಯೆ ಈಗ 583 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 118 ಮಂದಿಯಲ್ಲಿ 64 ಮಂದಿ ಪುರುಷರು ಹಾಗೂ 54 ಮಂದಿ ಮಹಿಳೆಯರು. ಇವರಲ್ಲಿ 69 ಮಂದಿ ಉಡುಪಿ ತಾಲೂಕಿನವರಾದರೆ 34 ಮಂದಿ ಕುಂದಾಪುರ ಹಾಗೂ 15 ಮಂದಿ ಕಾರ್ಕಳ ತಾಲೂಕಿನವರು. 118ರಲ್ಲಿ 94 ಮಂದಿ ಹೋಮ್ ಐಸೋಲೇಷನ್‌ನಲಿ್ಲದ್ದಾರೆ ಎಂದು ಡಾ.ಸೂಡ ತಿಳಿಸಿದರು.

ಶುಕ್ರವಾರ 126 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 25,812ಕ್ಕೇರಿದೆ. ನಿನ್ನೆ ಜಿಲ್ಲೆಯ 2773 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 118 ಮಂದಿ ಸೇರಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 26,588 ಎಂದು ಡಾ.ಸೂಡ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,62,441 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಜಿಲ್ಲೆಯಲ್ಲಿ ಇಂದು ಕೋವಿಡ್‌ಗೆ ಯಾರೂ ಮೃತಪಟ್ಟಿಲ್ಲ. ಈವರೆಗೆ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 193 ಆಗಿದೆ.

5656 ಮಂದಿಯಿಂದ ಲಸಿಕೆ ಸ್ವೀಕಾರ
ಕೊರೋನ ವಿರುದ್ಧದ ಲಭ್ಯವಿರುವ ಲಸಿಕೆಯನ್ನು ಜಿಲ್ಲೆಯಲ್ಲಿ ಇಂದು ಒಟ್ಟು 5656 ಮಂದಿ ಸ್ವೀಕರಿಸಿದ್ದಾರೆ. ಇವರಲ್ಲಿ 4216 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 1440 ಮಂದಿಗೆ ಎರಡನೇ ಡೋಸ್ ನೀಡಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಶನಿವಾರ ಜಿಲ್ಲೆಯಲ್ಲಿ 45 ವರ್ಷ ಮೇಲಿನ ಒಟ್ಟು 5468 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 4183 ಮಂದಿ ಮೊದಲ ಡೋಸ್‌ನ್ನೂ, 1285 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 58 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 130 ಮಂದಿ ಕೊರೋನ ಮುಂಚೂಣಿ ಯೋಧರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ ಎಂದವರು ಹೇಳಿದರು.

ಜಿಲ್ಲೆಯಲ್ಲಿ ಇದುವರೆಗೆ 1,61,267 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 27,783 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News