ಲಾಕ್‍ಡೌನ್ ಕುರಿತು ಆತಂಕ ಬೇಡ: ಪೊಲೀಸ್ ಆಯುಕ್ತ ಕಮಲ್ ಪಂತ್

Update: 2021-04-17 16:50 GMT

ಬೆಂಗಳೂರು, ಎ.17: ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್‍ಡೌನ್ ಜಾರಿಯಾಗುತ್ತಿದೆ ಎನ್ನುವ ಆತಂಕ ಬೇಡ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.

ಶನಿವಾರ ಸಾಮಾಜಿಕ ಜಾಲತಾಣ ಮೂಲಕ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ಸರಕಾರ ರಾತ್ರಿ ಕರ್ಫ್ಯೂ ಸೇರಿದಂತೆ ಹಲವು ಕಠಿಣ ನಿಯಮಗಳನ್ನು ಕೈಗೊಂಡಿದೆ. ಈ ನಡುವೆ ಹಲವರು ಲಾಕ್‍ಡೌನ್ ಬಗ್ಗೆ ಪ್ರಶ್ನಿಸುತ್ತಿದ್ದು, ಈ ಬಗ್ಗೆ ಆತಂಕ ಪಡುವುದು ಬೇಡ ಎಂದು ನುಡಿದರು.

ಪೊಲೀಸ್ ಇಲಾಖೆಯಲ್ಲಿ ಬಹುತೇಕರು ಕೊರೋನ ಸಂಬಂಧ ಎರಡನೇ ಲಸಿಕೆ ಪಡೆದಿದ್ದಾರೆ. ಅದೇ ರೀತಿ, ಜನ ಯಾವುದೇ ವದಂತಿಗಳಿಗೆ ಕಿವಿಗೊಡದೇ ಲಸಿಕೆ ಪಡೆಯಬೇಕು. ಇನ್ನು ರಾತ್ರಿ ಕರ್ಫ್ಯೂ ತುಂಬಾ ಕಟ್ಟುನಿಟ್ಟಾಗಿ ನಡೆಯುತ್ತಿದೆ. ಆದರೆ, ಹೋಮ್ ಡೆಲಿವರಿಯವರಿಗೆ ಯಾವುದೇ ಅಡಚಣೆಯಿಲ್ಲ ಎಂದರು.

ನರ ಜೊತೆ ನಾವು ಹತ್ತಿರದ ಸಂಪರ್ಕ ಇಟ್ಟುಕೊಂಡು ಜನಪರವಾಗಿ ಕೆಲಸ ಮಾಡಬೇಕಾಗುತ್ತದೆ. ನಾವು ಬೇರೆ ತರಹದ ಸುಮಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಹೀಗಾಗಿ ಜನ ಸಂಪರ್ಕ ಸಭೆ ಎಲ್ಲಾ ಠಾಣೆಗಳಲ್ಲೂ ಮಾಡುತ್ತಿದ್ದೇವೆ ಎಂದ ಅವರು, ಸಾರ್ವಜನಿಕರು ತಮ್ಮ ಅಹವಾಲುಗಳನ್ನ ನಮ್ಮ ಬಳಿ ಹೇಳುತ್ತಿದ್ದು, ಯಾರು ಪೊಲೀಸ್ ಠಾಣೆಗೆ ಬರಲು ಸಾಧ್ಯವಾಗದವರಿಗೆ ಸಾಮಾಜಿಕ ಜಾಲತಾಣದಲ್ಲಿಯೇ ಜನರ ಜೊತೆ ಸಂಪರ್ಕದಲ್ಲಿ ಇರಲಾಗುವುದು ಎಂದು ಕಮಲ್ ಪಂತ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News