ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮಹಿಳಾ ಸಿಬ್ಬಂದಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ

Update: 2021-04-17 17:33 GMT

ಮಂಗಳೂರು, ಎ.17: ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ 35 ಮಂದಿ ಮಹಿಳಾ ಪೊಲೀಸರಿಗೆ  ಎ.30ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.

ಗರ್ಭಿಣಿಯರು ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ಮಹಿಳಾ ಸಿಬ್ಬಂದಿ ಮನೆಯಲ್ಲಿಯೇ ಇದ್ದು ಕಂಪ್ಯೂಟರ್/ ಲ್ಯಾಪ್ ಟಾಪ್ ಗಳಲ್ಲಿ ಕಚೇರಿ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. 

ಕಳೆದ ಬಾರಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 300ಕ್ಕೂ ಅಧಿಕ ಮಂದಿ ಕರ್ತವ್ಯ ನಿರತ ಪೊಲೀಸರು ಕೊರೋನ ಸೋಂಕಿಗೆ ಒಳಗಾಗಿದ್ದರು. 

ಕಮಿಷನರೇಟ್ ವ್ಯಾಪ್ತಿಯ ಠಾಣೆಗಳ ಸಮೀಪ ಕೊರೋನ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರು ಸ್ವೀಕರಿಸಲು ಶನಿವಾರ ಪ್ರತ್ಯೇಕ ಕಿಯೋಸ್ಕ್‌ಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News