ಯಡಿಯೂರಪ್ಪ ಚೇತರಿಕೆ: ಆಸ್ಪತ್ರೆಯಲ್ಲಿ ಪುಸ್ತಕ ಓದುತ್ತಿರುವ ಸಿಎಂ

Update: 2021-04-18 05:24 GMT

ಬೆಂಗಳೂರು, ಎ.18: ಕೋವಿಡ್-19 ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚೇತರಿಸಿಕೊಂಡಿದ್ದಾರೆ.

ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಆಸ್ಪತ್ರೆಯಲ್ಲಿ ಕುಳಿತು ದಿನಪತ್ರಿಕೆ ಹಾಗೂ ಕೆಲವೊಂದು ಪುಸ್ತಕಗಳನ್ನು ಓದುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News