ಕೋವಿಡ್ ಪ್ರಕರಣ ಹೆಚ್ಚಳ: ಜೆಇಇ(ಮೇನ್)ಪರೀಕ್ಷೆ ಮುಂದೂಡಿಕೆ

Update: 2021-04-18 06:34 GMT

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್ 27ರಿಂದ 30ಕ್ಕೆ ನಿಗದಿಯಾಗಿದ್ದ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ(ಮೇನ್)ಅನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂತ್ ರವಿವಾರ ತಿಳಿಸಿದ್ದಾರೆ.

“ಈಗಿನ ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಪ್ರಿಲ್ 2021ರ ಜೆಇಇ ಮೇನ್ ಪರೀಕ್ಷೆಯನ್ನು ಮುಂದೂಡುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ(ಎನ್ ಟಿಎ)ಸಲಹೆ ನೀಡಿದ್ದೇನೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅವರ ಶೈಕ್ಷಣಿಕ ಜೀವನವನ್ನು ನಿಭಾಯಿಸುವಂತೆ ಮಾಡುವುದು ನಮ್ಮ ಪ್ರಮುಖ ಕಾಳಜಿಯಾಗಿದೆ ಎಂದು ಪೋಖ್ರಿಯಾಲ್ ಅವರು ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ ಕೋವಿಡ್ ಪರಿಸ್ಥಿತಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಪ್ರಿಲ್ ನಲ್ಲಿ ನಡೆಯಬೇಕಾಗಿದ್ದ ಜೆಇಇ(ಮೇನ್) ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್ ಟಿಎ ಅಧಿಕೃತ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News