ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

Update: 2021-04-18 09:53 GMT

ಬೆಳ್ತಂಗಡಿ, ಎ.18: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯ ಪ್ರಚಾರ ಕಾರ್ಯ ಮುಗಿಸಿ ಬಂದ ಅವರು ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಸೋಂಕು ತಗಲಿರುವುದು ದೃಢಪಟ್ಟಿದೆ. ಆದರೆ ಅವರಿಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಆದರೂ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News