ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ: ಹೈಕೋರ್ಟ್

Update: 2021-04-18 12:00 GMT

ಬೆಂಗಳೂರು, ಎ.18: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ವಕೀಲ ಎಸ್.ಉಮೇಶ್ ಹಾಗೂ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. 

ಕೆಲ ಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠ, ವಿಶೇಷ ತನಿಖಾ ತಂಡದ ಮುಖ್ಯಸ್ಥ ಸೌಮೇಂದು ಮುಖರ್ಜಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ತನಿಖಾ ವರದಿಯನ್ನು ಪರಿಶೀಲಿಸಿತು. ಬಳಿಕ, 'ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಎಫ್‌ಐಆರ್ ಗಳಲ್ಲೂ ಎಸ್‌ಐಟಿ ತನಿಖೆ ನಡೆಸಿ ಪ್ರತ್ಯೇಕ ವರದಿಗಳನ್ನು ಸಲ್ಲಿಸಿದೆ. ಈ ಮೂರು ವರದಿಗಳಲ್ಲೂ ತನಿಖೆಗೆ ಸಂಬಂಧಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವ ವಿವರವಿದೆ. ಇವುಗಳನ್ನು ಗಮನಿಸಿದರೆ ಸದ್ಯಕ್ಕೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವ ಅಗತ್ಯವಿಲ್ಲ' ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News