ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯಗೆ ಕೊರೋನ ಸೋಂಕು ದೃಢ

Update: 2021-04-18 14:18 GMT

ಬೆಂಗಳೂರು, ಎ.18: ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, 'ನನಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಐಸೋಲೇಶನ್ ಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ' ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News