ರೋಷನ್ ಬೇಗ್ ಆಸ್ತಿ ಜಪ್ತಿ ಬಗ್ಗೆ ನಿಲುವು ಮರುಪರಿಶೀಲಿಸಿ: ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2021-04-18 14:28 GMT

ಬೆಂಗಳೂರು, ಎ.18: ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿ ಜಪ್ತಿ ಸಂಬಂಧ ಸರಕಾರ ತನ್ನ ನಿಲುವು ಮರುಪರಿಶೀಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ಸರಕಾರ ತನ್ನ ಅಧಿಕಾರ ಬಳಸುತ್ತಿಲ್ಲ. ಆಸ್ತಿ ಜಪ್ತಿಗೆ ಐಎಂಎ ಹಾಗೂ ರೋಷನ್ ಬೇಗ್ ನಡುವಿನ ವ್ಯವಹಾರ ಕುರಿತು ಸಿಬಿಐ ವರದಿಗಾಗಿ ಕಾಯುತ್ತಾ ಕೂರುವ ಅಗತ್ಯವಿಲ್ಲ. ಐಎಂಎ ಕುರಿತ ಆಡಿಟ್ ಆಧರಿಸಿ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಬಹುದು. ಈ ನಿಟ್ಟಿನಲ್ಲಿ ಸರಕಾರ ತನ್ನ ನಿಲುವನ್ನು ಮುಂದಿನ ಮೂರು ತಿಂಗಳಲ್ಲಿ ಮರುಪರಿಶೀಲಿಸಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News