ಕಾಸರಗೋಡು: ಕರ್ನಾಟಕ ಮೂಲದ ಕಾರ್ಮಿಕನ ಕೊಲೆ ಪ್ರಕರಣ; ಆರೋಪಿ ಬಂಧನ

Update: 2021-04-18 14:35 GMT

ಕಾಸರಗೋಡು, ಎ.18: ಕರ್ನಾಟಕ ಮೂಲದ ಕಾರ್ಮಿಕನೋರ್ವನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿಯೋರ್ವನನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಾಗಲಕೋಟೆಯ ಉಮೇಶ್ ಗೌಡ (37) ಎಂದು ಗುರುತಿಸಲಾಗಿದೆ.

ಕೊಲೆಗೀಡಾದ ಕಾರ್ಮಿಕ ಕರ್ನಾಟಕ ನಿವಾಸಿಯಾಗಿದ್ದು, ಈತನ ಗುರುತು ಪತ್ತೆಯಾಗಿಲ್ಲ. ಹೆಸರು ಮತ್ತು ವಿಳಾಸ ಪತ್ತೆಯಾಗದ ಹಿನ್ನಲೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

ಇವರು ಕೆಲ ಸಮಯದಿಂದ ಕೋಟಿಕುಳಂ ಪರಿಸರದಲ್ಲಿ ದುಡಿದು ರೈಲ್ವೆ ಪ್ಲಾಟ್ ಫಾಮ್ ಅಥವಾ ಬಸ್ಸು ನಿಲ್ದಾಣಗಳಲ್ಲಿ ರಾತ್ರಿ ಕಾಲ ಕಳೆಯುತ್ತಿದ್ದರು. ಎಪ್ರಿಲ್ 14 ರಂದು ಉಮೇಶ್ ಗೌಡ ಮತ್ತು ಈ ಕಾರ್ಮಿಕನ ನಡುವೆ ಜಗಳವಾಗಿದ್ದು, ಕೊಲೆಯಲ್ಲಿ ಕೊನೆಗೊಂಡಿದೆ.

ಎ.15 ರಂದು ಬೆಳಗ್ಗೆ ಕೋಟಿಕುಳಂ ಮಸೀದಿ ಸಮೀಪದ ಅಂಗಡಿ ವರಾಂಡದಲ್ಲಿ ಮೃತದೇಹ ಪತ್ತೆಯಾಗಿದೆ. ಸಮೀಪದ ಸಿಸಿಟಿವಿ ಕ್ಯಾಮರಾ ವನ್ನು ಪೊಲೀಸರು ಪರಿಶೀಲಿಸಿದಾಗ ಗೋಣಿ ಚೀಲವೊಂದರಲ್ಲಿ ಮಲಗಿಸಿ ಓರ್ವ ಮೃತದೇಹವನ್ನು ಎಳೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದೆ. ಈ ಸಂಬಂಧ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News