ಉಡುಪಿ: ಮಾಸ್ಕ್ ಧರಿಸದವರಿಂದ ಒಂದೇ ದಿನದಲ್ಲಿ 93,900ರೂ. ದಂಡ ವಸೂಲಿ!
Update: 2021-04-18 22:04 IST
ಉಡುಪಿ, ಎ.18: ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊವೀಡ್-19 ಎರಡನೆ ಅಲೆಯನ್ನು ತಡೆಯಲು ಜಿಲ್ಲಾಡಳಿತ ಕೋವಿಡ್-19 ನಿಯಮ ಗಳನ್ನು ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಎ.17ರಂದು ಒಂದೇ ದಿನ ಮಾಸ್ಕ್ ಧರಿಸದವರಿಂದ 93,900ರೂ. ದಾಖಲೆ ಪ್ರವಾಣದಲ್ಲಿ ದಂಡ ವಸೂಲಿ ಮಾಡಲಾಗಿದೆ.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 2000ರೂ., ಗ್ರಾಪಂ ವ್ಯಾಪ್ತಿಯಲ್ಲಿ 800ರೂ., ಅಬಕಾರಿ ಇಲಾಖೆಯಿಂದ 1000ರೂ., ಕಂದಾಯ ಇಲಾಖೆಯಿಂದ 1200ರೂ., ಪೊಲೀಸ್ ಇಲಾಖೆಯಿಂದ 88,900ರೂ. ದಂಡವನ್ನು ವಸೂಲಿ ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಮಾಸ್ಕ್ ಧರಿಸದ 27995 ಮಂದಿಯಿಂದ 29,75,900ರೂ. ದಂಡ ಸಂಗ್ರಹಿಸಲಾಗಿದೆ ಎಂದು ಉಡುಪಿ ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.