ಶಿರ್ವ: ಸುಲಿಗೆ ಪ್ರಕರಣ ಬೇಧಿಸಿದ ಪೊಲೀಸರಿಗೆ ಅಭಿನಂದನೆ

Update: 2021-04-18 16:59 GMT

 ಶಿರ್ವ, ಎ.18: ಕಳೆದ ನವೆಂಬರ್ ತಿಂಗಳಲ್ಲಿ ಬಂಟಕಲ್ಲು ದೇವಸ್ಥಾನದ ಸಮೀಪ ವಾಸವಿದ್ದ ವೃದ್ದ ಒಂಟಿ ಮಹಿಳೆಯ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣವನ್ನು ಬೇಧಿಸಿ, ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಬಂಟಕಲ್ಲು ನಾಗರಿಕ ಸೇವಾ ಸಮಿತಿ ವತಿಯಿಂ ದ ಶುಕ್ರವಾರ ಅಭಿನಂದಿಸಲಾಯಿತು.

 ಪ್ರಕರಣವನ್ನು ಬೇಧಿಸುವಲ್ಲಿ ಪ್ರಧಾನ ಪಾತ್ರವಹಿಸಿದ ಕಾಪು ಪೋಲಿಸ್ ವೃತ್ತ ನಿರೀಕ್ಷಕ ಪ್ರಕಾಶ್, ಅಪರಾಧ ಪತ್ತೆ ವಿಬಾಗದ ಪ್ರವೀಣ್ ಕುಮಾರ್, ರಾಜೇಶ್ ಹಾಗೂ ಸಿಬ್ಬಂಧಿ ವರ್ಗದವರನ್ನು ಕಾಪು ವೃತ್ತನಿರೀಕ್ಷಕರ ಕಾರ್ಯಾಲಯದಲ್ಲಿ ಅಭಿನಂದಿಸಲಾಯಿತು.

ನಾಗರಿಕ ಸಮಿತಿಯ ಅಧ್ಯಕ್ಷ ಕೆ.ಆರ್.ಪಾಟ್ಕರ್, ಉಪಾಧ್ಯಕ್ಷ ಬಿ.ಪುಂಡಲೀಕ ಮರಾಠೆ ಮಾತನಾಡಿದರು. ಸಮಿತಿಯ ಕಾರ್ಯದರ್ಶಿ ದಿನೇಶ ದೇವಾಡಿಗ, ಕೋಶಾಧಿಕಾರಿ ಜಗದೀಶ ಆಚಾರ್ಯ, ಬಂಟಕಲ್ಲು ಕಾರು ಚಾಲಕ ಮಾಲಕರ ಸಂಘದ ಅಧ್ಯ್ಷ ಉಮೇಶ ರಾವ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News