ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Update: 2021-04-19 04:55 GMT

ಬೆಂಗಳೂರು, ಏಪ್ರಿಲ್ 19- ನಾಡಿನ ಹಿರಿಯ ಭಾಷಾತಜ್ಞ, ಸಂಶೋಧಕ ಶತಾಯುಷಿ  ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ನಿಘಂಟು ರಚನೆಗೆ, ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರೊ. ಜಿ.ವಿ. ಅವರ ಕೊಡುಗೆ ಅನನ್ಯವಾದುದು. ತಮ್ಮ ಸುದೀರ್ಘ ಜೀವಿತಾವಧಿಯಲ್ಲಿ ಇಗೋ ಕನ್ನಡ ಸಾಮಾಜಿಕ ನಿಘಂಟು ಸೇರಿದಂತೆ  60 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಅಪೂರ್ವ ಸಾಧನೆಗೈದವರು. ಕೊನೆಯವರೆಗೂ ಬರವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಬೆರಗು ಮೂಡಿಸುತ್ತದೆ. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಅಪೂರ್ವ ರತ್ನವೊಂದು ಮರೆಯಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬ, ಅಪಾರ ಶಿಷ್ಯವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News