ಕಠಿಣ ಕ್ರಮಗಳ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರ: ಸಚಿವ ಡಾ.ಸುಧಾಕರ್

Update: 2021-04-19 07:13 GMT

ಬೆಂಗಳೂರು, ಎ.19: ಕೋವಿಡ್ -19 ಎರಡನೇ ಅಲೆ ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಇಂದು(ಎ.19) ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಜನಪ್ರತಿನಿಧಿಗಳ ಸಭೆಯಲ್ಲಿ ಎಲ್ಲರ ಸಲಹೆಗಳನ್ನು ಪಡೆದು, ಕಠಿಣ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಸೋಂಕಿತರಾಗಿ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆನ್‌ಲೈನ್‌ ಮೂಲಕ (ವರ್ಚವಲ್‌) ಇಂದಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ವಿರೋಧ ಪಕ್ಷಗಳ ನಾಯಕರ ಜೊತೆಗೂ ಮಾತನಾಡುತ್ತೇವೆ. ಅಲ್ಲದೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ವರದಿಯನ್ನು ಮುಂದಿಟ್ಟು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.

ಲಾಕ್ ಡೌನ್ ಒಂದೇ ಪರಿಹಾರವಲ್ಲ. ಆದರೆ, ಬಿಗಿಯಾದ ಕ್ರಮಗಳು ಅಗತ್ಯ. ಅದರಂತೆ ಕೆಲವೊಂದು ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಲಾಗುವುದು. ಸಭೆಯ ನಂತರ ಇಂದಿನಿಂದ ಅಥವಾ ಮಂಗಳವಾರದಿಂದ ಬಿಗಿ ಕ್ರಮದ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News