ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್

Update: 2021-04-19 08:04 GMT

ಸುಳ್ಯ, ಎ.19: ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಮೂವರು ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ.

ಎಸೆಸೆಲ್ಸಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡುತ್ತಿದ್ದ ವೇಳೆ ಮೂವರು ಸೋಂಕಿಗೆ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಇಂಟರ್ ನಲ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಇತರ ವಿದ್ಯಾರ್ಥಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಅದರಂತೆ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಪ್ರೌಢಶಾಲೆಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News