ಕೊರೋನ 2ನೇ ಅಲೆಯಲ್ಲಿ ಹೆಚ್ಚಿನ ರೋಗಿಗಳಲ್ಲಿ ಉಸಿರಾಟದ ತೊಂದರೆ, ಹೆಚ್ಚಿನ ಆಮ್ಲಜನಕ ಅಗತ್ಯವಿದೆ: ಕೇಂದ್ರ

Update: 2021-04-19 12:14 GMT

ಹೊಸದಿಲ್ಲಿ: ಕೊರೋನ ವೈರಸ್ ನ ಎರಡನೇ ಅಲೆಯಲ್ಲಿ ಹೆಚ್ಚಿನ ಕೋವಿಡ್ ರೋಗಿಗಳು ಇತರ ಯಾವುದೇ ರೋಗಲಕ್ಷಣಗಳಿಗಿಂತ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ.  ಇದು ಈ ಬಾರಿ ಹೆಚ್ಚಿನ ಆಮ್ಲಜನಕದ ಅಗತ್ಯಕ್ಕೆ ಕಾರಣವಾಗಿದೆ ಎಂದು ಕೇಂದ್ರ ಸರಕಾರ ಇಂದು ತಿಳಿಸಿದೆ.

ಮೈಕೈ ನೋವಿನಂತಹ ಇತರ ಲಕ್ಷಣಗಳು ಕೊರೋನದ ಮೊದಲ ಅಲೆಯಲ್ಲಿ ಹೆಚ್ಚಿದ್ದವು. ಕೊರೋನದ ಎರಡೂ ಅಲೆಗಳಲ್ಲಿ ಶೇ.70ಕ್ಕಿಂತ ಹೆಚ್ಚು ರೋಗಿಗಳು 40ಕ್ಕಿಂತ ಹೆಚ್ಚು ವಯಸ್ಸಾದವರು ಎಂದು  ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್ ಹೇಳಿದರು.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ ವರ್ಷ ಮತ್ತು ಈಗಿನ ಸಾವಿನ ಶೇಕಡಾವಾರು ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News